Vidhana Soudha is all decked up for the grand one-day diamond jubilee celebration on Wednesday (October 25, 2017). President of India Ram Nath Kovind address the special joint session of Karnataka legislature on October 25, 2017 on the occasion of diamond jubilee of Vidhana Soudha.
ವಿಧಾನಸೌಧದ ವಜ್ರ ಮಹೋತ್ಸವದ ಅಂಗವಾಗಿ ವಿಶೇಷ ವಿಧಾನಮಂಡಲ ಜಂಟಿ ಅಧಿವೇಶನ ನಡೆಯುತ್ತಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಬುಧವಾರ ಬೆಳಗ್ಗೆ ಸ್ಪೀಕರ್ ಕೆ.ಬಿ.ಕೋಳಿವಾಡ, ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧಕ್ಕೆ ಆಗಮಿಸಿದ ರಾಷ್ಟ್ರಪತಿ, ರಾಜ್ಯಪಾಲರನ್ನು ಸ್ವಾಗತಿಸಿದರು. ಮಂಗಳವಾರವೇ ರಾಮನಾಥ್ ಕೋವಿಂದ್ ಅವರು ಬೆಂಗಳೂರಿಗೆ ಆಗಮಿಸಿದ್ದರು.
ವಿಧಾನಸೌಧದ ವಜ್ರ ಮಹೋತ್ಸವದ ಅಂಗವಾಗಿ ವಿಶೇಷ ವಿಧಾನಮಂಡಲ ಜಂಟಿ ಅಧಿವೇಶನ ನಡೆಯುತ್ತಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಬುಧವಾರ ಬೆಳಗ್ಗೆ ಸ್ಪೀಕರ್ ಕೆ.ಬಿ.ಕೋಳಿವಾಡ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧಕ್ಕೆ ಆಗಮಿಸಿದ ರಾಷ್ಟ್ರಪತಿ, ರಾಜ್ಯಪಾಲರನ್ನು ಸ್ವಾಗತಿಸಿದರು. ಮಂಗಳವಾರವೇ ರಾಮನಾಥ್ ಕೋವಿಂದ್ ಅವರು ಬೆಂಗಳೂರಿಗೆ ಆಗಮಿಸಿದ್ದರು. ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಬಳಿಕ ರಾಜಭವನದಲ್ಲಿ ವಾಸ್ತವ್ಯ ಹೂಡಿದ್ದರು. ಬುಧವಾರ ರಾಜ್ಯಪಾಲ ವಜುಭಾಯಿ ಅವರು ರಾಷ್ಟ್ರಪತಿಗಳನ್ನು ವಿಧಾನಸೌಧಕ್ಕೆ ಕರೆತಂದರು. ಭಾಷಣದ ಬಳಿಕ ರಾಷ್ಟ್ರಪತಿಗಳು ವಿಧಾನ ಪರಿಷತ್ ಸಭಾಂಗಣ ವೀಕ್ಷಣೆ ಮಾಡಲಿದ್ದಾರೆ. ಬೆಂಗಳೂರು ನಿರ್ಮಿಸಿದ ಕೆಂಪೇಗೌಡ, ಕಿತ್ತೂರು ರಾಣಿ ಚೆನ್ನಮ್ಮ, ವಿಜಯನಗರ ಸಾಮ್ರಾಜ್ಯವನ್ನು ನೆನಪು ಮಾಡಿಕೊಂಡ ರಾಷ್ಟ್ರಪತಿಗಳು. ಬೆಂಗಳೂರು ಹೊಗಳಿ, ರಾಜ್ಯದ ಇತಿಹಾಸವನ್ನು ಸಂಕ್ಷಿಪ್ತವಾಗಿ ಭಾಷಣದಲ್ಲಿ ಹೇಳಿದ ರಾಷ್ಟ್ರಪತಿಗಳು.ಇನ್ನಷ್ಟು ಮಾಹಿತಿಗೆ ಈ ವೀಡಿಯೋ ನೋಡಿ