ಸಕಲೇಶಪುರ ತಾಲ್ಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಶಿರಾಡಿಘಾಟ್ ರಸ್ತೆ ಕುಸಿಯುವ ಆತಂಕ ಎದುರಾಗಿದೆ. ದೋಣಿಗಾಲ್ ಬಳಿ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್ ರಸ್ತೆ ಈಗಾಗಲೇ ಮಳೆಯಿಂದಾಗಿ ಸ್ವಲ್ಪ ಸ್ವಲ್ಪವೇ ಕುಸಿಯುತ್ತಿದೆ. ಈಗಾಗಲೇ ಮರಳುಚೀಲ ಹಾಕುವ ಕೆಲಸ ನಡೆಯುತ್ತಿದೆ. ಮಂಗಳೂರು, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಹಲವು ಸ್ಥಳಗಳಿಗೆ ಶಿರಾಡಿಘಾಟ್ ರಸ್ತೆ ಸಂಪರ್ಕ ಕಲ್ಪಿಸುತ್ತೆ. ಕಳೆದ ವರ್ಷ ಕೂಡ ಶಿರಾಡಿಘಾಟ್ ರಸ್ತೆ ಕುಸಿದ ಕಾರಣ 1 ತಿಂಗಳ ಕಾಲ ರಸ್ತೆ ಸಂಪೂರ್ಣ ಬಂದ್ ಮಾಡಲಾಗಿತ್ತು.
#publictv #shiradighat #raineffect