ದುನಿಯಾ ವಿಜಯ್ ನಟನೆಯ 'ಲ್ಯಾಂಡ್ಲಾರ್ಡ್' ಸಿನಿಮಾ ಜನವರಿ 23ರಂದು ತೆರೆಕಂಡು ವಿಮರ್ಶಕರ ಪ್ರಶಂಸೆಗೆ ಪಾತ್ರವಾಗಿತ್ತು. ಸಾಮಾಜಿಕ ಅಸಮಾನತೆ ಮತ್ತು ಜಾತಿ ಶೋಷಣೆ ಕುರಿತ ಈ ಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ. ಈ ಬೆಂಬಲದಿಂದ 'ಲ್ಯಾಂಡ್ಲಾರ್ಡ್' ಹೆಚ್ಚು ಜನರನ್ನ ತಲುಪೋದಕ್ಕೆ ಸಾಧ್ಯವಾಗಲಿದೆ.